
ವರದಿ ಈರಪ್ಪ ದದ್ದಲ್
ರಾಯಚೂರು : ಗ್ರಾಮೀಣ ಕ್ಷೇತ್ರದ ವ್ಯಾಪ್ತಿಯ ದುಗನೂರು ಬಿಚ್ಚಾಲಿ ಗಿಲ್ಲೇಸೂಗೂರು ಗ್ರಾಮಗಳಲ್ಲಿ ಶಾಸಕ ದದ್ದಲ್ ಬಸನಗೌಡ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು.
ತಾಲೂಕಿನ ದುಗನೂರು ಗ್ರಾಮದಲ್ಲಿ ಕೆಕೆಆರ್ ಡಿ ಬಿಯ ಮ್ಯಾಕ್ರೋ ಯೋಜನೆಯಡಿಯಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿ ಮುಖ್ಯಮಂತ್ರಿ ವಿಶೇಷ ಅನುದಾನದ ಅಡಿಯಲ್ಲಿ ಶ್ರೀ ಮೈಲಾರಲಿಂಗೇಶ್ವರ ಶ್ರೀ ಕಡಬೂರ ದೇವಸ್ಥಾನ ಗುಡಿಕಲ್ ಅಲ್ಲಪೀರ್.ಮಂದಿರ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು . ಬಿಚ್ಚಾಲಿ ಗ್ರಾಮದಲ್ಲಿ ಮ್ಯಾಕ್ರೋ ಅನುದಾನದ ಅಡಿಯಲ್ಲಿ ಚರ್ಚ್ ಹತ್ತಿರ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಗಿಲ್ಲೇಸೂಗೂರು ಗ್ರಾಮದಲ್ಲಿ ಮ್ಯಾಕ್ರೋ ಅನುದಾನದ ಅಡಿಯಲ್ಲಿ ಸಮುದಾಯ ಭವನ ನಿರ್ಮಾಣ ಮುಖ್ಯಮಂತ್ರಿ ವಿಶೇಷ ಅನುದಾನದ ಡಿಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಬುಡಕಟ್ಟು ವಸತಿ ಶಾಲೆಗೆ ನಾಲ್ಕು ಕೊಠಡಿ ನಿರ್ಮಾಣ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ದೇವಸೂಗುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು ಊರಿನ ಹಿರಿಯರು ಮುಖಂಡರು ಸುತ್ತಮುತ್ತಲಿನ ಗ್ರಾಮಗಳ ಹಿರಿಯರು ನಾಮನಿರ್ದೇಶನ ಸದಸ್ಯರು ಅಧಿಕಾರಿಗಳು ಗ್ರಾಂ ಪಂಚಾಯತಿ ಅಧ್ಯಕ್ಷರು ಸದಸ್ಯರು ಕಾರ್ಯಕರ್ತರು ಗ್ರಾಮಸ್ಥರು ಉಪಸ್ಥಿತರಿದ್ದರು