
ಕಾರಟಗಿ : ಶುಭಂ ಕಿಡ್ಸ್ ಶಾಲೆಯಲ್ಲಿ ಅಂತರಾಷ್ಟ್ರೀಯ ಹುಲಿ ದಿನಾಚರಣೆಯನ್ನು ಆಚರಿಸಲಾಯಿತು.
ಈ ವೇಳೆ ಶಾಲೆಯ ಮುಖ್ಯಸ್ಥರಾದ ಶ್ರೀದೇವಿ ಕೊಲ್ಲಾ ಮಾತನಾಡಿ ಜುಲೈ 29 ಅಂತರಾಷ್ಟ್ರೀಯ ಹುಲಿ ದಿನ. ಆಹಾರ ಸರಪಣಿಯಲ್ಲೂ ಹುಲಿ ಅತ್ಯಂತ ಪ್ರಮುಖ ಸ್ಥಾನದಲ್ಲಿದೆ. ಹುಲಿ ನಮ್ಮ ದೇಶದ ರಾಷ್ಟ್ರೀಯ ಪ್ರಾಣಿ. ಹುಲಿ ಗಂಭೀರವಾದ ಮತ್ತು ಭವ್ಯವಾದ ಪ್ರಾಣಿ. ಇತ್ತಿಚಿನ ದಿನಗಳಲ್ಲಿ ಅಳುವಿನಂಚಿನತ್ತ ಹುಲಿಯ ಸಂತತಿಯು ಸಾಗುತ್ತಿದೆ. ಕ್ಷೀಣಿಸುತ್ತಿರುವ ಹುಲಿಗಳ ಸಂಖ್ಯೆಯ ಕುರಿತಾಗಿ ಜಾಗೃತಿ ಮೂಡಿಸಲು ಪ್ರತಿ ವರ್ಷ ಜುಲೈ 29 ರಂದು ಅಂತರಾಷ್ಟ್ರೀಯ ಹುಲಿ ದಿನವನ್ನು ಆಚರಿಸಲಾಗುತ್ತದೆ ಎಂದರು.
ನಂತರ ನರ್ಸರಿ, ಎಲ್ ಕೆ ಜಿ, ಯು ಕೆ ಜಿ, ಮಕ್ಕಳು ಹುಲಿ ಚಿತ್ರವನ್ನು ಬಿಡಿಸಿದರು, ಮಕ್ಕಳು ಹುಲಿಯ ಮಾಸ್ಕ್ ಧರಿಸಿದ್ದರು. ಈ ಸಂದರ್ಭದಲ್ಲಿ ಶಿಕ್ಷಕಿ ಅರುಣ, ಸೌಮ್ಯ, ಉಪಸ್ಥಿತರಿದ್ದರು.